ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಸವರಾಜ ಹೊರಟ್ಟಿ
ಬೆಂಗಳೂರು,ಮೇ16: ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಇಂದು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಸೋಮವಾರ ವಿಧಾನಸೌಧದ ಮೊದಲ ಮಹಡಿಯಲ್ಲಿನ ಸಭಾಪತಿ ಅವರ ಕಚೇರಿಯಲ್ಲಿ ‘ಮೇ 16ರಂದು ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ನನ್ನ ರಾಜೀನಾಮೆಯನ್ನು ನೀಡುತ್ತಿದ್ದೇನೆ, ಪರಿಷತ್ತಿನಲ್ಲಿನ ನನ್ನ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ' ಎಂದು ಎರಡು ಪ್ರತ್ಯೇಕ ಪತ್ರಗಳನ್ನು ಪರಿಷತ್ ಉಪಸಭಾಪತಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದು, ರಾಜೀನಾಮೆ ಪತ್ರವನ್ನು ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ಸಲ್ಲಿಕೆ ಮಾಡಿದರು.
ಬಿಜೆಪಿ ಸೇರಲು ಮುಂದಾಗಿರುವ ಹೊರಟ್ಟಿ , ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ ಮೇ 18ಕ್ಕೆ ರಾಜೀನಾಮೆ ನೀಡುವ ಕುರಿತು ತಿಳಿಸಿದ್ದರು. ಇದೀಗ ತುರ್ತು ಪತ್ರಿಕಾಗೋಷ್ಠಿ ನಡೆಸಿರುವ ಅವರು, ವಿಧಾನಪರಿಷತ್ ಸದಸ್ಯ ಸ್ಥಾನ ಹಾಗೂ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
Next Story