varthabharthi


ಕರ್ನಾಟಕ

ಮೇ 18ರಿಂದ ರಾಜ್ಯದಲ್ಲಿ ಮಳೆ ಬಿರುಸು

ವಾರ್ತಾ ಭಾರತಿ : 16 May, 2022

ಬೆಂಗಳೂರು, ಮೇ 16: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶಭರಿತ ಮೋಡಗಳ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆಯು (Rain) ಮೇ 18ರಿಂದ ಇನ್ನಷ್ಟು ಚುರುಕಾಗಲಿದೆ. 

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 17ರಂದು ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. 

ಮೇ 18 ಹಾಗೂ 19ರಂದು ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಬೀಳಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂ. ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆಯಲ್ಲಿ ಮುಂದಿನ 4 ದಿನ, ಬೀದರ್, ವಿಜಯಪುರ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಗದಗ, ಹಾವೇರಿ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)