varthabharthi


ಕರ್ನಾಟಕ

ಬ್ಯಾಡ್ಮಿಂಟನ್ ತಂಡದ ಸದಸ್ಯ ಲಕ್ಷ್ಯ ಸೇನ್‍ಗೆ 5 ಲಕ್ಷ ರೂ. ಘೋಷಿಸಿದ ಸಿಎಂ ಬೊಮ್ಮಾಯಿ

ವಾರ್ತಾ ಭಾರತಿ : 16 May, 2022

ಬೆಂಗಳೂರು, ಮೇ 16 : ಥಾಮಸ್ ಕಪ್ ಗೆದ್ದ ಬ್ಯಾಡ್ಮಿಂಟನ್ ತಂಡದ ಸದಸ್ಯರಾಗಿರುವ ಕ್ರೀಡಾಪಟು ಶ್ರೀಲಕ್ಷ್ಯ ಸೇನ್ ಅವರಿಗೆ ಕರ್ನಾಟಕ ಸರಕಾರ 5 ಲಕ್ಷ ರೂ.ಗಳನ್ನು ಬಹುಮಾನವನ್ನಾಗಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಸೋಮವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಸಹಯೋಗದೊಂದಿಗೆ 14 ವರ್ಷದೊಳಗಿನ ಬಾಲಕ/ಬಾಲಕಿಯರುಗಳಿಗಾಗಿ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವಕರ್ನಾಟಕದ ದ್ವಿತೀಯ “ಮಿನಿ ಒಲಂಪಿಕ್ ಕ್ರೀಡಾಕೂಟ - 2022” ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಗೆಲ್ಲಲು ಆಡುವುದು ಬಹಳ ಮುಖ್ಯ. ಸೋಲಬಾರದು ಎಂದು ಆಡುವುದು ನಿಮಗೆ ಯಶವನ್ನು ನೀಡುವುದಿಲ್ಲ. ಹೀಗಾಗಿ, ಯಾವಾಗಲೂ ಸಕಾರಾತ್ಮಕವಾಗಿ ಆಡಬೇಕು. ನಮ್ಮ ಸರಕಾರ ಎಲ್ಲ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಿದೆ. 75 ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಉತ್ತಮ ತರಬೇತುದಾರರಿಂದ ಗುಣಮಟ್ಟದ ತರಬೇತಿ ಹಾಗೂ ಸೌಲಭ್ಯಗಳನ್ನು ನೀಡುವ ಮೂಲಕ ಮುಂದಿನ ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ಸಜ್ಜುಗೊಳಿಸಲಾಗುತ್ತಿದೆ ಎಂದರು.

ಮಿನಿ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಎಲ್ಲ ಯುವ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿಗಳು ಶುಭಾಶಯ ಕೋರಿದರು. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲ ಕ್ರೀಡಾಪಟುಗಳು ಅಂತರರಾಷ್ಟ್ರೀಯ ಮಟ್ಟದ ಒಲಂಪಿಕ್ಸ್ ನಲ್ಲಿ ಭಾಗವಹಿಸಬೇಕು ಎಂಬ ಆಶಯ ವ್ಯಕ್ತಪಡಿಸಿ, ಪದಕಗಳನ್ನು ಗೆಲ್ಲುವ ಮೂಲಕ ರಾಜ್ಯಕ್ಕೆ ಹಾಗೂ ದೇಶಕ್ಕೆ ಕೀರ್ತಿ ತರಬೇಕು ಎಂದು ತಿಳಿಸಿದರು. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)