ದಕ್ಷಿಣ ಕನ್ನಡ
ಸುಳ್ಯ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿ ಸೆರೆ
ವಾರ್ತಾ ಭಾರತಿ : 16 May, 2022

ಸುಳ್ಯ: ಪಿಯುಸಿ ವಿದ್ಯಾರ್ಥಿನಿಯೊಂದಿಗೆ ಪ್ರೀತಿಯ ನಾಟಕವಾಡಿ ಆಕೆಯನ್ನು ಪುಸಲಾಯಿಸಿ ಸುಳ್ಯದ ಲಾಡ್ಜ್ ವೊಂದಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಸುಳ್ಯದ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡೆಕೋಲಿನ ಅಂಬ್ರೋಟಿ ಕಕ್ಕಾಜೆ ನಿವಾಸಿ ಅಶ್ವಿನ್ ಬಂಧಿತ ಆರೋಪಿ.
ಅಶ್ವಿನ್ ಪಿಯುಸಿ.ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡು ಬಳಿಕ ಆಕೆಯನ್ನು ಎಪ್ರಿಲ್ ತಿಂಗಳಿನಲ್ಲಿ ಸುಳ್ಯಕ್ಕೆ ಬರಲು ಹೇಳಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದನೆಂದೂ ಆರೋಪಿಸಲಾಗಿದೆ.
ಮೇ 9ರಂದು ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಮೇರೆಗೆ ಅಶ್ವಿನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)