ಕರ್ನಾಟಕ
ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕ
ವಾರ್ತಾ ಭಾರತಿ : 17 May, 2022

ಬೆಂಗಳೂರು: ವಿಧಾನಸಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ನೇಮಕ ಮಾಡಲಾಗಿದೆ.
ರಘುನಾಥ್ ರಾವ್ ಮಲಕಾಪೂರೆ ಅವರನ್ನು ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೇಮಕಗೊಳಿಸಿದ್ದು, ಇಂದು 3 ಗಂಟೆಗೆ ಕೊಠಡಿ ಸಂಖ್ಯೆ 117 ರಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.
ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಭಾಪತಿ ಸ್ಥಾನ ತೆರವಾಗಿತ್ತು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)