varthabharthi


ಬೆಂಗಳೂರು

PHOTO- ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ, ವಾಹನ ಸವಾರರ ಪರದಾಟ

ವಾರ್ತಾ ಭಾರತಿ : 17 May, 2022

ಬೆಂಗಳೂರು: ಮೇ 17: ಆಸಾನಿ ಚಂಡಮಾರುತದ ಬಳಿಕ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. 

ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದ್ದು, ಮಂಗಳವಾರ ಸಂಜೆಯಿಂದ ಸಿಲಿಕಾನ್‌ ಸಿಟಿಯಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದೆ.

ಹವಾಮಾನ ಇಲಾಖೆ ಬೆಂಗಳೂರಿನಲ್ಲಿ ಮಂಗಳವಾರ, ಬುಧವಾರ ಆರೆಂಜ್‌ ಅಲರ್ಟ್‌ ನೀಡಿದ್ದು, ವರ್ಷಧಾರೆ ಮುಂದುವರಿಯುವ ಸಾಧ್ಯತೆ ಇದೆ.

ಜೆಪಿ ನಗರ, ಜಯನಗರ, ಲಾಲ್‌ಬಾಗ್‌, ಚಿಕ್ಕಪೇಟೆ, ಮೆಜೆಸ್ಟಿಕ್‌, ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ, ಎಂಜಿ ರೋಡ್‌, ಕಬ್ಬನ್‌ ಪಾರ್ಕ್‌, ವಿಜಯನಗರ, ರಾಜರಾಜೇಶ್ವರಿ ನಗರ, ಕೆಂಗೇರಿ, ಮಾಗಡಿ ರೋಡ್‌, ಮೈಸೂರು ರಸ್ತೆ ಸೇರಿ ಬೆಂಗಳೂರಿನ ಬಹುತೇಕ ಕಡೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳಲ್ಲಿ ವಿದ್ಯುತ್‌ ಕೂಡ ಕೈಕೊಟ್ಟಿದೆ. ಭಾರೀ ಮಳೆಯಿಂದ ಬೆಂಗಳೂರಿನ ರಸ್ತೆಗಳಲ್ಲಿ ಹೊಳೆಯಂತೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)