ದಕ್ಷಿಣ ಕನ್ನಡ
ಉಪ್ಪಿನಂಗಡಿ: ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ
ವಾರ್ತಾ ಭಾರತಿ : 18 May, 2022

ಉಪ್ಪಿನಂಗಡಿ, ಮೇ 18: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ 'ಭಾರತಿ' ಸಂಸ್ಥೆಗೆ ಸೇರಿದ ಖಾಸಗಿ ಬಸ್ ಉಪ್ಪಿನಂಗಡಿಯ ನೀರಕಟ್ಟೆ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದೆ. ಇದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.





‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)