ವಿಟ್ಲ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಮೃತ್ಯು
ಬಂಟ್ವಾಳ: ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ. ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅಳಿಕೆ ನಿವಾಸಿ ಅನ್ವಿತಾ ಮೃತಪಟ್ಟವರು.
ಅನ್ವಿತಾ ಜೇಸೀಸ್ ಶಾಲೆಯ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದು, ಇಂದು ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಅನ್ವಿತಾ ಸಾವನ್ನಪ್ಪಿದ ಕಾರಣ ಜೇಸೀಸ್ ಶಾಲೆಗೆ ರಜೆ ನೀಡಲಾಗಿದೆ.
ಮೃತರು ತಂದೆ-ತಾಯಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Next Story