varthabharthi


ರಾಷ್ಟ್ರೀಯ

ಮಹಾರಾಷ್ಟ್ರ: ಟ್ಯಾಂಕರ್-ಟ್ರಕ್ ನಡುವೆ ಢಿಕ್ಕಿ, 9 ಮಂದಿ ಸಜೀವ ದಹನ

ವಾರ್ತಾ ಭಾರತಿ : 20 May, 2022

ಮುಂಬೈ:  ಮಹಾರಾಷ್ಟ್ರದ ಚಂದ್ರಾಪುರ ನಗರದ ಹೊರವಲಯದಲ್ಲಿ ಡೀಸೆಲ್ ತುಂಬಿದ ಟ್ಯಾಂಕರ್ ಹಾಗೂ  ಮರವನ್ನು ಸಾಗಿಸುತ್ತಿದ್ದ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ನಂತರ ಹೊತ್ತಿಕೊಂಡ ಬೆಂಕಿಯಲ್ಲಿ ಒಂಬತ್ತು ಜನರು ಸಜೀವ ದಹನಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ರಾತ್ರಿ 10.30ರ ಸುಮಾರಿಗೆ ಚಂದ್ರಾಪುರ-ಮುಲ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದರು.

ಚಂದ್ರಾಪುರ ನಗರದ ಸಮೀಪ ಅಜಯಪುರ ಸಮೀಪ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಡೀಸೆಲ್ ತುಂಬಿದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಬೆಂಕಿ ಕಾಣಿಸಿಕೊಂಡು ಒಂಬತ್ತು ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ ಎಂದು ಚಂದ್ರಾಪುರದ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಸುಧೀರ್ ನಂದನವರ್ ತಿಳಿಸಿದ್ದಾರೆ.

ಅಪಘಾತ ಸಂಭವಿಸಿದ ಸುಮಾರು ಒಂದು ಗಂಟೆಯ ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಅಜಯಪುರ ತಲುಪಿದ್ದು, ಕೆಲವು ಗಂಟೆಗಳ ನಂತರ ಬೆಂಕಿಯನ್ನು ಹತೋಟಿಗೆ ತರಲಾಯಿತು ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ.

ನಂತರ ಮೃತರ ಶವಗಳನ್ನು ಚಂದ್ರಾಪುರ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಎಂದು ನಂದನವರ್ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)