ಬೆಂಗಳೂರು
ಉಗ್ರ ಸಂಘಟನೆಯೊಂದಿಗೆ ನಂಟು ಆರೋಪ ಹೊಂದಿದ್ದ ವ್ಯಕ್ತಿಗೆ ಜಾಮೀನು ನೀಡಿದ ಹೈಕೋರ್ಟ್
ವಾರ್ತಾ ಭಾರತಿ : 20 May, 2022

ಬೆಂಗಳೂರು, ಮೇ 20: ಇಸ್ಲಾಮಿಕ್ ಸ್ಟೇಟ್(ಐಎಸ್) ಸಂಘಟನೆಯ ಸದಸ್ಯನಾಗಿದ್ದಾನೆ ಎಂಬ ಆರೋಪ ಎದುರಿಸುತ್ತಿದ್ದ ಆಲ್-ಹಿಂದ್ ಗುಂಪಿನ ಸದಸ್ಯ ಸಲೀಂ ಖಾನ್ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಆದರೆ, ಇದೇ ಪ್ರಕರಣದ ಮತ್ತೊಬ್ಬ ಆರೋಪಿ ಮೊಹಮ್ಮದ್ ಝೈದ್ ವಿರುದ್ಧ ಆರೋಪ ಪಟ್ಟಿಯಲ್ಲಿ ಗಂಭೀರ ಅಂಶಗಳಿರುವ ಹಿನ್ನೆಲೆಯಲ್ಲಿ ನ್ಯಾಯಪೀಠವು ಜಾಮೀನು ನಿರಾಕರಿಸಿದೆ.
ಸಲೀಂಖಾನ್ ಮತ್ತು ಮೊಹಮ್ಮದ್ ಝೈದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾ.ಎಸ್.ರಾಚಯ್ಯ ಅವರಿದ್ದ ವಿಶೇಷ ವಿಭಾಗೀಯ ಪೀಠ ಈ ಆದೇಶ ನೀಡಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)