varthabharthi


ರಾಷ್ಟ್ರೀಯ

ಜ್ಞಾನವಾಪಿಯಲ್ಲಿ ‘ಶಿವಲಿಂಗ’ದ ಪತ್ತೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಬಂಧನ

ಪ್ರಾಧ್ಯಾಪಕ ರತನ್ ಲಾಲ್ ಬಿಡುಗಡೆ ಮಾಡುವಂತೆ ಒತ್ತಾಯಿಸಿ ದಿಲ್ಲಿ ವಿವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ವಾರ್ತಾ ಭಾರತಿ : 21 May, 2022

ಹೊಸದಿಲ್ಲಿ : ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಬಂಧಿತರಾಗಿರುವ ಪ್ರಾಧ್ಯಾಪಕರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ದಿಲ್ಲಿ  ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಲಾ ವಿಭಾಗದ ಹೊರಗೆ ಶನಿವಾರ ಪ್ರತಿಭಟನೆ ನಡೆಸಿದರು.

ದಿಲ್ಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನ ಪ್ರಾಧ್ಯಾಪಕ ರತನ್ ಲಾಲ್ ಅವರನ್ನು ಶುಕ್ರವಾರ ಬಂಧಿಸಲಾಗಿದೆ.

ಪೊಲೀಸರ ಪ್ರಕಾರ, ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ  ‘ಶಿವಲಿಂಗ’ದ ಪತ್ತೆ ಬಗ್ಗೆ ಪ್ರಾಧ್ಯಾಪಕರು ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ.

ಮೂಲಗಳ ಪ್ರಕಾರ, ಪೊಲೀಸರು ಇಂದು ರತನ್ ಲಾಲ್ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ಸುಪ್ರೀಂ ಕೋರ್ಟ್ ವಕೀಲ ವಿನೀತ್ ಜಿಂದಾಲ್ ಅವರು ರತನ್ ಲಾಲ್ ವಿರುದ್ಧ ದಿಲ್ಲಿ  ಪೊಲೀಸರಿಗೆ ದೂರು ನೀಡಿದ್ದರು. ದೂರಿನಲ್ಲಿ ಲಾಲ್ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿತ್ತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)