varthabharthi


ರಾಷ್ಟ್ರೀಯ

ಉತ್ತರಾಖಂಡ: ಯಮುನೋತ್ರಿ ಹೆದ್ದಾರಿಯಲ್ಲಿ ಸುರಕ್ಷತಾ ಗೋಡೆ ಕುಸಿತ, 10,000 ಮಂದಿಗೆ ಸಂಕಷ್ಟ

ವಾರ್ತಾ ಭಾರತಿ : 21 May, 2022

Photo: ANI

ಡೆಹ್ರಾಡೂನ್: ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಹೆದ್ದಾರಿಯ ಭದ್ರತಾ ಗೋಡೆ ಕುಸಿದು ಸುಮಾರು 10,000 ಜನರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇದರಿಂದಾಗಿ ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, 10,000 ಜನರು ಹೆದ್ದಾರಿಯ ವಿವಿಧೆಡೆ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ರಸ್ತೆಯನ್ನು ಮತ್ತೆ ತೆರೆಯಲು 3 ದಿನಗಳು ಬೇಕಾಗಬಹುದು.

ಕೆಲವು ಚಿಕ್ಕ ವಾಹನಗಳಿಂದ ಪ್ರಯಾಣಿಕರನ್ನು ಸ್ಥಳಾಂತರಿಸಲು ಜಿಲ್ಲಾಡಳಿತ ಪ್ರಯತ್ನಿಸುತ್ತಿದ್ದು, ದೂರದಿಂದ ದೊಡ್ಡ ವಾಹನಗಳಲ್ಲಿ ಬಂದವರು ತೆರಳಲು ಸಾಧ್ಯವಾಗುತ್ತಿಲ್ಲ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)