ಕ್ರೀಡೆ
ಮುಂಬೈ ವಿರುದ್ಧ ಮುಗ್ಗರಿಸಿದ ಡೆಲ್ಲಿ, ಪ್ಲೇ ಆಫ್‌ಗೆ ಅರ್ಹತೆ ಪಡೆದ ಆರ್‌ಸಿಬಿ

Photo: twitter
ಮುಂಬೈ, ಮೇ 21: ಪ್ಲೇ ಆಫ್‌ಗೆ ಅರ್ಹತೆ ಪಡೆಯಲು ಗೆಲ್ಲಲೇಬೇಕಾದ ಐಪಿಎಲ್‌ನ 69ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 5 ವಿಕೆಟ್‌ಗಳ ಅಂತರದಿಂದ ಸೋತಿದೆ. ಡೆಲ್ಲಿ ಸೋಲಿನೊಂದಿಗೆ ಆರ್‌ಸಿಬಿ ಪ್ಲೇ ಆಫ್‌ಗೆ ತೇರ್ಗಡೆಯಾಗಿದೆ.
ಗೆಲ್ಲಲು 160 ರನ್ ಗುರಿ ಪಡೆದ ಮುಂಬೈ ನಿಗದಿತ 19.1 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿತು.
ಆರ್‌ಸಿಬಿ 14 ಪಂದ್ಯಗಳಲ್ಲಿ 16 ಅಂಕ ಗಳಿಸಿ 4ನೇ ಸ್ಥಾನದೊಂದಿಗೆ ಪ್ಲೇ ಆಫ್‌ಗೆ ಅರ್ಹತೆ ಪಡೆಯಿತು. ಮೇ 25ರಂದು ನಡೆಯುವ ಎಲಿಮಿನೇಟರ್ ಸುತ್ತಿನಲ್ಲಿ ಲಕ್ನೊ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಮುಂಬೈ 14ನೇ ಪಂದ್ಯದಲ್ಲಿ 4ನೇ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿದೆ.
ಮುಂಬೈ ಪರ ಆರಂಭಿಕ ಬ್ಯಾಟರ್ ಇಶಾನ್ ಕಿಶನ್(48 ರನ್, 35 ಎಸೆತ, 3 ಬೌಂಡರಿ, 4 ಸಿಕ್ಸರ್), ಡೆವಾಲ್ಡ್ ಬ್ರೆವಿಸ್(37 ರನ್, 33 ಎಸೆತ), ಟಿಮ್ ಡೇವಿಡ್(34 ರನ್, 11 ಎಸೆತ), ತಿಲಕ್ ವರ್ಮಾ(21 ರನ್)ಎರಡಂಕೆಯ ಸ್ಕೋರ್ ಗಳಿಸಿದರು.
ಇದಕ್ಕೂ ಮೊದಲು ವಾಂಖೆಡೆ ಸ್ಟೇಡಿಯಂನಲ್ಲಿ ಶನಿವಾರ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಡೆಲ್ಲಿ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿದೆ. ಅಮೋಘ ಬೌಲಿಂಗ್ ಪ್ರದರ್ಶಿಸಿದ ವೇಗದ ಬೌಲರ್ ಜಸ್‌ಪ್ರಿತ್ ಬುಮ್ರಾ (3-25)ಡೆಲ್ಲಿಯನ್ನು 160ರೊಳಗೆ ಕಟ್ಟಿಹಾಕಲು ನೆರವಾದರು.
ಡೆಲ್ಲಿ ಒಂದು ಹಂತದಲ್ಲಿ 50 ರನ್ ಗಳಿಸುವಷ್ಟರಲ್ಲಿ 4 ವಿಕೆಟ್‌ಗಳನ್ನು ಕಳೆದುಕೊಂಡಿತು. ಆಗ ರೊವ್‌ಮನ್ ಪೊವೆಲ್(43 ರನ್, 34 ಎಸೆತ, 1 ಬೌಂಡರಿ, 4 ಸಿಕ್ಸರ್) ಹಾಗೂ ರಿಷಭ್ ಪಂತ್(39 ರನ್, 33 ಎಸೆತ,4 ಬೌಂ., 1 ಸಿ.) 5ನೇ ವಿಕೆಟ್‌ಗೆ 75 ರನ್ ಸೇರಿಸಿ ಇನಿಂಗ್ಸ್‌ನ್ನು ಹಳಿಗೆ ತಂದರು. ಪಂತ್ ವಿಕೆಟನ್ನು ಉರುಳಿಸಿದ ರಮಣ್‌ದೀಪ್ ಸಿಂಗ್ ಡೆಲ್ಲಿ ಮುನ್ನಡೆಗೆ ಕಡಿವಾಣ ಹಾಕಿದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ