varthabharthi


ನಿಧನ

ಕೇಶವ ಜೋಗಿತ್ತಾಯ

ವಾರ್ತಾ ಭಾರತಿ : 24 May, 2022

ಸುಳ್ಯ: ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕ ಕೇಶವ ಜೋಗಿತ್ತಾಯ ಅಲ್ಪ ಕಾಲದ ಅಸೌಖ್ಯದಿಂದ ಮೇ 24 ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಕೇಶವ ಜೋಗಿತ್ತಾಯ ಅವರು ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ತನ್ನೀರುಪಂಥ ಬಂಗಾಲಾಯಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅರ್ಚಕರಾಗಿ, ಪ್ರಧಾನ ಅರ್ಚಕರಾಗಿ ಸುಮಾರು 50 ವರ್ಷ ಸೇವೆ ಸಲ್ಲಿಸಿದ್ದರು.

ಜ್ಯೋತಿಷ್ಯ ಶಾಸ್ತ್ರದಲ್ಲಿ ಅಪಾರ ಅನುಭವ ಪಡೆದಿದ್ದ ಅವರು ಹಲವಾರು ದೇವಸ್ಥಾನಗಳ ನಿರ್ಮಾಣ ಸಂದರ್ಭದಲ್ಲಿ ಮಾರ್ಗದರ್ಶನ ನೀಡುತ್ತಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)