varthabharthi


ರಾಷ್ಟ್ರೀಯ

ಹಿಂದಿಗೆ ನೀಡಿದ ಸ್ಥಾನಮಾನ ತಮಿಳಿಗೂ ನೀಡಿ: ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ಆಗ್ರಹ

ವಾರ್ತಾ ಭಾರತಿ : 26 May, 2022

ತಮಿಳುನಾಡು ಸಿಎಂ

ಚೆನ್ನೈ: ಹಿಂದಿಗೆ ಸಮಾನವಾಗಿ ತಮಿಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇಬ್ಬರೂ ವೇದಿಕೆಯನ್ನು ಹಂಚಿಕೊಂಡಿದ್ದು, ಈ ವೇಳೆ ಮಾತನಾಡಿದ ಸ್ಟಾಲಿನ್‌, ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ NEET ನಿಂದ ತಮಿಳುನಾಡಿಗೆ ವಿನಾಯಿತಿ ನೀಡುವಂತೆಯೂ ಕರೆ ನೀಡಿದ್ದಾರೆ.

ಹಿಂದಿಯಂತೆ ತಮಿಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಿ ಮತ್ತು ಮದ್ರಾಸ್ ಹೈಕೋರ್ಟ್‌ನಲ್ಲಿ ತಮಿಳನ್ನು ಅಧಿಕೃತ ಭಾಷೆಯನ್ನಾಗಿ ಮಾಡಿ ಎಂದು ಮುಖ್ಯಮಂತ್ರಿ ಸ್ಟಾಲಿನ್‌ ಆಗ್ರಹಿಸಿದ್ದಾರೆ.

ಕಳೆದ ವರ್ಷ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದ ಡಿಎಂಕೆ, ತಮಿಳಿಗೆ "ಅಧಿಕೃತ ಮತ್ತು ಆಡಳಿತಾತ್ಮಕ" ಭಾಷಾ ಸ್ಥಾನಮಾನವನ್ನು ನೀಡುವಂತೆ ಬಹಳ ಹಿಂದಿನಿಂದಲೂ ಪ್ರತಿಪಾದಿಸುತ್ತಾ ಬಂದಿದೆ.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ತಮಿಳು ಭಾಷೆಯನ್ನು "ಶಾಶ್ವತ" ಎಂದು ಬಣ್ಣಿಸಿರುವುದಾಗಿ ndtv ವರದಿ ಮಾಡಿದೆ.

ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ (NEET) ನಿಂದ ತಮಿಳುನಾಡಿಗೆ ವಿನಾಯಿತಿ ನೀಡಲು ತಮಿಳುನಾಡು ವಿಧಾನಸಭೆಯು ಅಂಗೀಕರಿಸಿದ ಮಸೂದೆಯನ್ನು ಕೇಂದ್ರವೂ ಅಂಗೀಕರಿಸಬೇಕೆಂದು ಸ್ಟಾಲಿನ್ ಒತ್ತಾಯಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)