ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 135 ರೂ. ಇಳಿಕೆ
Photo:PTI
ಹೊಸದಿಲ್ಲಿ: ತೈಲ ಮಾರುಕಟ್ಟೆ ಕಂಪೆನಿಗಳು(ಒಎಂಸಿ)ಬುಧವಾರದಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಪ್ರತಿ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಸುಮಾರು 135 ರೂ. ಇಳಿಕೆ ಮಾಡಿವೆ.
ಇದರಿಂದಾಗಿ ಬೆಂಗಳೂರಿನಲ್ಲಿ 19 ಕೆ.ಜಿ. ತೂಕದ ಪ್ರತಿ ಸಿಲಿಂಡರ್ ಬೆಲೆಯು ರೂ.2,300ಕ್ಕೆ ಇಳಿಕೆಯಾಗಿದೆ.
ರಾಷ್ಟ್ರರಾಜಧಾನಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆಯ ಪ್ರತಿ ಸಿಲಿಂಡರ್ ಬೆಲೆ 2,355.50 ರೂ.ನಿಂದ ಈಗ ಪ್ರತಿ ಸಿಲಿಂಡರ್ ಗೆ 2219.00 ರೂ.ಗೆ ಇಳಿಕೆಯಾಗಿದೆ.
ಮುಂಬೈನಲ್ಲಿ ವಾಣಿಜ್ಯ ಬಳಕೆಯ ಎಲ್ ಪಿಜಿ ಬೆಲೆ ಪ್ರತಿ ಸಿಲಿಂಡರ್ ಗೆ 2307 ರೂ.ನಿಂದ 2171.50ಗೆ ಇಳಿಕೆಯಾಗಿದೆ. ಕೋಲ್ಕತಾದಲ್ಲಿ 2455 ರೂ. ನಿಂದ 2322 ರೂ.ಗೆ ಇಳಿದಿದೆ. ಚೆನ್ನೈನಲ್ಲಿ ಗ್ರಾಹಕರು ಇಂದಿನಿಂದ 2,508 ರೂ. ಬದಲಿಗೆ 2, 373 ರೂ.ವ್ಯಯಿಸಬೇಕಾಗಿದೆ.
ಇದೇ ವೇಳೆ ಗೃಹ ಬಳಕೆಯ ಸಬ್ಸಿಡಿರಹಿತ ಪ್ರತಿ 14.2 ಕೆಜಿ ತೂಕದ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ರಾಷ್ಟ್ರರಾಜಧಾನಿಯಲ್ಲಿ 1,003 ರೂ. ಹಾಗೂ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಸಿಲಿಂಡರ್ ಬೆಲೆ 1,006 ರೂ. ಆಗಿದೆ.