ಸಾವರ್ಕರ್ ಫೋಟೋ ಪ್ರಕರಣ; ಮಂಗಳೂರು ವಿವಿ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ
ಮಂಗಳೂರು : ನಗರದ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಿನ ತರಗತಿಯಲ್ಲಿ ಸಾವರ್ಕರ್ ಫೋಟೋವನ್ನು ಅಳವಡಿಸಿರುವ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮಕ್ಕೆ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ಬಿ.ಎಸ್. ಒತ್ತಾಯಿಸಿದ್ದಾರೆ.
ವಿವಾದ ಸೃಷ್ಟಿಸುವ ದುರುದ್ದೇಶದಿಂದ ಈ ಕೃತ್ಯ ಮಾಡಲಾಗಿದೆ. ಕಾಲೇಜಿನ ಆಡಳಿತ ಮಂಡಳಿಯು ತಪ್ಪಿತಸ್ಥ ವಿದ್ಯಾರ್ಥಿಗಳ ಮೇಲೆ ಕ್ರಮಕೈಗೊಳ್ಳಬೇಕು. ಇದಕ್ಕೆ ಪ್ರಚೋದನೆ ನೀಡಿದವರ ವಿರುದ್ಧವೂ ಕ್ರಮ ಜರಗಿಸಬೇಕು. ವಿದ್ಯಾಸಂಸ್ಥೆಗಳಲ್ಲಿ ಯಾರ ಫೋಟೋ ಅಳವಡಿಸಬೇಕು ಎಂಬುದನ್ನು ಶಿಕ್ಷಣ ಇಲಾಖೆಯು ಸ್ಪಷ್ಪಡಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.
Next Story