ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಜೂನ್ ೧೨ರಂದು ಬೆಳಗ್ಗೆ ೧೦:೩೦ಕ್ಕೆ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಸೇರಿದಂತೆ ಶಾಸಕರು, ವಿವಿಧ ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story