ಉಡುಪಿ: ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ
ಉಡುಪಿ, ಜೂ.15: ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು.
ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಗಂಭೀರವಲ್ಲದ ಸಮಸ್ಯೆ ಗಳನ್ನು ಸ್ಥಳದಲ್ಲೇ ಪರಿಹರಿಸುವ ದೃಷ್ಟಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಜೂ.20ರಂದು ಬೈಂದೂರು ಪ್ರವಾಸಿ ಮಂದಿರ, ಜೂ.21ರಂದು ಕುಂದಾಪುರ ಪ್ರವಾಸಿ ಮಂದಿರ, 22ರಂದು ಕಾರ್ಕಳ ಪ್ರವಾಸಿ ಮಂದಿರ, 23ರಂದು ಹೆಬ್ರಿ ಪ್ರವಾಸಿ ಮಂದಿರ, 24ರಂದು ಕಾಪು ಪುರಸಭೆ ಕಚೇರಿ ಹಾಗೂ ಜೂ.27ರಂದು ಬ್ರಹ್ಮಾವರದ ಚಾಂತಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬೆಳಗ್ಗೆ 11 ರಿಂದ ಅಪರಾಹ್ನ 1:00ರವರೆಗೆ ಸ್ವೀಕರಿಸಲಾಗುವುದು.
ಉಡುಪಿ ತಾಲೂಕಿಗೆ ಸಂಬಂಧಪಟ್ಟ ದೂರು ಅರ್ಜಿಗಳನ್ನು ನೇರವಾಗಿ ಉಡುಪಿ ಲೋಕಾಯುಕ್ತ ಕಛೇರಿಗೆ ನೀಡಬಹುದಾಗಿದೆ. ಕಾರ್ಯಕ್ರಮದಲ್ಲಿ ಉಡುಪಿ ಘಟಕದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭಾಗವಹಿಸಲಿದ್ದು, ಸಾರ್ವಜನಿಕರು ಸರಕಾರಿ ಕೆಲಸ ಕಾರ್ಯಗಳಲ್ಲಿ ತೊಂದರೆ ಅನುಭವಿಸಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881/2536661 ಹಾಗೂ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2536661 ಅನ್ನು ಸಂಪರ್ಕಿಸಬಹುದು ಎಂದು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.