varthabharthi


ರಾಷ್ಟ್ರೀಯ

ಮಹಾರಾಷ್ಟ್ರದ ಮನೆಯೊಂದರಲ್ಲಿ 9 ಮಂದಿ ಕುಟುಂಬ ಸದಸ್ಯರ ಮೃತದೇಹ ಪತ್ತೆ: ಆತ್ಮಹತ್ಯೆ ಶಂಕೆ

ವಾರ್ತಾ ಭಾರತಿ : 20 Jun, 2022

ಸಾಂಗ್ಲಿ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಸೋಮವಾರ ಒಂದೇ ಕುಟುಂಬದ ಒಂಬತ್ತು ಮಂದಿ ಸದಸ್ಯರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಆತ್ಮಹತ್ಯೆ ಪ್ರಕರಣ ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾಗಿ ndtv.com ವರದಿ ಮಾಡಿದೆ. ಮುಂಬೈನಿಂದ 350 ಕಿ.ಮೀ ದೂರದಲ್ಲಿರುವ ಸಾಂಗ್ಲಿ ಜಿಲ್ಲೆಯ ಮಹೈಸಾಲ್‌ನಲ್ಲಿರುವ ಮನೆಯೊಂದರಲ್ಲಿ ಮೃತದೇಹಗಳು ಪತ್ತೆಯಾಗಿವೆ.

"ನಮಗೆ ಒಂದು ಮನೆಯಲ್ಲಿ ಒಂಬತ್ತು ಮೃತದೇಹಗಳು ಕಂಡುಬಂದಿದೆ. ಮೂರು ಶವಗಳು ಒಂದೇ ಸ್ಥಳದಲ್ಲಿದ್ದರೆ, ಆರು ದೇಹಗಳು ಮನೆಯ ಬೇರೆ ಬೇರೆ ಸ್ಥಳಗಳಲ್ಲಿ ಪತ್ತೆಯಾಗಿದೆ" ಎಂದು ಸಾಂಗ್ಲಿ ಪೊಲೀಸ್ ವರಿಷ್ಠಾಧಿಕಾರಿ ದೀಕ್ಷಿತ್ ಗೆಡಮ್ ಹೇಳಿದ್ದಾರೆ.

ಇದು 'ಆತ್ಮಹತ್ಯೆಯಾಗಿರುವ ಸಾಧ್ಯತೆಯಿದೆಯೇ? ಎಂಬ ಪ್ರಶ್ನೆಗೆ, ಪೊಲೀಸರು ಸ್ಥಳದಲ್ಲಿದ್ದು ಸಾವಿನ ಕಾರಣವನ್ನು ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದರು. ಇದು ಆತ್ಮಹತ್ಯೆಯ ಪ್ರಕರಣ ಎಂದು ಶಂಕಿಸಲಾಗಿದೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆದರೆ, ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದ್ದು, ಅವರು ವಿಷಕಾರಿ ಪದಾರ್ಥವನ್ನು ಸೇವಿಸಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)