ತೆಂಗಿನ ಮರದಿಂದ ಬಿದ್ದ ಗಾಯಾಳು ಮೃತ್ಯು
ಕಾಪು: ತೆಂಗಿನ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉಳಿಯಾರಗೊಳಿ ತಾಳಿತೋಟ ಎಂಬಲ್ಲಿ ನಡೆದಿದೆ.
ಮೃತರನ್ನು ತಾಳಿತೋಟ ನಿವಾಸಿ ವಿನೋಧರ ಎ.ಸನಿಲ್ (55) ಎಂದು ಗುರುತಿಸಲಾಗಿದೆ. ಇವರು ಜೂ.4ರಂದು ಸೇಂದಿ ತೆಗೆಯಲು ತೆಂಗಿನ ಮರಕ್ಕೆ ಹತ್ತಿದ್ದು, ಈ ವೇಳೆ ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯ ಗೊಂಡಿದ್ದರು. ಮಣಿಪಾಲ ಆಸ್ಪತ್ರೆಯ ಬಳಿಕ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಇವರು, ಚಿಕಿತ್ಸೆ ಫಲಕಾರಿಯಾಗದೆ ಜೂ.21ರಂದು ಬೆಳಗಿನ ಜಾವ ಮೃತಪಟ್ಟರು.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.
Next Story