varthabharthi


ರಾಷ್ಟ್ರೀಯ

ಮಹಾರಾಷ್ಟ್ರ: ವಿಧಾನಸಭೆ ವಿಸರ್ಜನೆಯ ಸುಳಿವು ನೀಡಿದ ಸಂಜಯ್‌ ರಾವತ್‌

ವಾರ್ತಾ ಭಾರತಿ : 22 Jun, 2022

ಹೊಸದಿಲ್ಲಿ: ಮಹಾರಾಷ್ಟ್ರ ರಾಜಕೀಯದಲ್ಲಿ ಹಲವಾರು ನಾಟಕೀಯ ಬೆಳವಣಿಗೆಗಳ ನಡುವೆ ವಿಧಾನಸಭೆ ವಿಸರ್ಜನೆಯ ಕುರಿತು ಶಿವಸೇನೆ ನಾಯಕ ಸಂಜಯ್‌ ರಾವುತ್‌ ಟ್ವೀಟ್‌ ಮಾಡಿದ್ದಾರೆ. ಶಿವಸೇನೆಯ ಏಕನಾಥ್‌ ಶಿಂಧೆ ಈಗಾಗಲೇ 40ಕ್ಕೂ ಹೆಚ್ಚು ಮಂದಿ ಶಾಸಕರೊಂದಿಗೆ ಗುವಾಹಟಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. 

"ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯು ವಿಧಾನಸಭೆ ವಿಸರ್ಜನೆಯತ್ತ ಸಾಗುತ್ತಿದೆ" ಎಂದು ಸಂಜಯ್‌ ರಾವತ್‌ ಟ್ವೀಟ್‌ ಮಾಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್‌ ಮುಖಂಡ ಕಮಲ್‌ನಾಥ್‌, "ಉದ್ಧವ್‌ ಠಾಕ್ರೆ ಕೋವಿಡ್‌ ಪಾಸಿಟಿವ್‌ ಕಾರಣದಿಂದ ವಿಶ್ರಾಂತಿಯಲ್ಲಿದ್ದಾರೆ. ವಿಧಾನಸಭೆ ವಿಸರ್ಜಿಸುವುದಿಲ್ಲ ಎಂದು ಹೇಳಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ. ಸದ್ಯ ಸಭೆ ನಡೆಯುತ್ತಿದ್ದು, ಉದ್ಧವ್‌ ಠಾಕ್ರೆ ವೀಡಿಯೊ ಕಾನ್ಫರೆನ್ಸ್‌ ಮೂಲಕ ಪಾಲ್ಗೊಂಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)