varthabharthi


ಅಂತಾರಾಷ್ಟ್ರೀಯ

ಅಫ್ಘಾನಿಸ್ತಾನದಲ್ಲಿ ಮತ್ತೊಮ್ಮೆ 4.3 ತೀವ್ರತೆಯ ಭೂಕಂಪ

ವಾರ್ತಾ ಭಾರತಿ : 23 Jun, 2022

photo: Twitter

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಭೂಕಂಪದಿಂದಾಗಿ 1000  ಜನರು ಸಾವನ್ನಪ್ಪಿದ  ಎರಡು ದಿನಗಳಲ್ಲಿ ಅಫ್ಘಾನಿಸ್ತಾನದ  ಕೆಲವು ಭಾಗಗಳಲ್ಲಿ ಮತ್ತೊಮ್ಮೆ 4.3 ತೀವ್ರತೆಯಲ್ಲಿ  ಭೂಕಂಪ ಗುರುವಾರ ಬೆಳಿಗ್ಗೆ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ವರದಿ ಮಾಡಿದೆ.

ಭೂಕಂಪನವು 163 ಕಿಲೋಮೀಟರ್ ಆಳದಲ್ಲಿ ಅಫ್ಗಾನಿಸ್ತಾನದ ಫೈಝಾಬಾದ್ ನಲ್ಲಿ ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರವು ತಿಳಿಸಿದೆ.

ಇದಕ್ಕೂ ಮುನ್ನ ಬುಧವಾರ, ಪೂರ್ವ ಅಫ್ಘಾನಿಸ್ತಾನದಲ್ಲಿ ಭೂಕಂಪ ಸಂಭವಿಸಿದೆ. ಸಾವಿನ ಸಂಖ್ಯೆ 1,000 ಮೀರಿದೆ.  1,500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)