ಕೆಎಸ್ಸಾರ್ಟಿಸಿಯಿಂದ ಪರಸ್ಪರ ಅಂತರ ನಿಗಮ ವರ್ಗಾವಣೆ ಪಟ್ಟಿ ಪ್ರಕಟ
ಬೆಂಗಳೂರು, ಜೂ. 24: ಕೆಎಸ್ಸಾರ್ಟಿಸಿ, ಬಿಎಂಟಿಸಿ ಸಹಿತ ಸಾರಿಗೆ ನಿಗಮಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಸಲ್ಲಿಸಿರುವ ಅರ್ಜಿಗಳನ್ನು ಪರಸ್ಪರ 862 ನೌಕರರು ಸಲ್ಲಿಸಿದ್ದು, 712 ನೌಕರರು ಸಂಭವನೀಯ ಪರಸ್ಪರ ವರ್ಗಾವಣೆ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದು, ಸದರಿ ಸಂಭವನೀಯ ವರ್ಗಾವಣೆ ಪಟ್ಟಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಸಂಭವನೀಯ ವರ್ಗಾವಣೆ ಪಟ್ಟಿಗೆ ಸಂಬಂಧಿಸಿದಂತೆ ನೌಕರರು ವೇತನ ಹಾಗೂ ಇತರೆ ಆಕ್ಷೇಪಣೆ ಇದ್ದಲ್ಲಿ ತಮ್ಮ ವಿಭಾಗದ ಆಡಳಿತಾಧಿಕಾರಿಗಳಿಗೆ ಸೂಕ್ತ ದಾಖಲೆಗಳೊಂದಿಗೆ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಲು ಜೂ.28ರ ಸಂಜೆ 5:30ರವರೆಗೆ ಅವಕಾಶ ಕಲ್ಪಿಸಲಾಗಿದೆ. ನಂತರ ಬಂದ ಯಾವುದೇ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಸಾರಿಗೆ ಸಂಸ್ಥೆಯ ಅಧಿಕೃತ ಪ್ರಕಟಣೆ ತಿಳಿಸಿದೆ.
Next Story