varthabharthi


ರಾಷ್ಟ್ರೀಯ

ಸಾಮಾಜಿಕ ಕಾರ್ಯಕರ್ತೆ, ಪತ್ರಕರ್ತೆ ತೀಸ್ತಾ ಸೆಟಲ್ವಾಡ್‌ ಮನೆಗೆ ಗುಜರಾತ್‌ ಎಟಿಎಸ್‌ ದೌಡು

ವಾರ್ತಾ ಭಾರತಿ : 25 Jun, 2022

ಹೊಸದಿಲ್ಲಿ: ಸಾಮಾಜಿಕ ಕಾರ್ಯಕರ್ತೆ ಮತ್ತು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ ರವರ ಮನೆಗೆ ಗುಜರಾತ್‌ ನ ಭಯೋತ್ಪಾದನಾ ನಿಗ್ರಹ ದಳ (ATS) ಆಗಮಿಸಿದ್ದು ಅವರ ಬಂಧನವಾಗುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಈ ಕುರಿತು ಯಾವುದೇ ಅಧಿಕೃತ ವಾರಂಟ್‌ ಅನ್ನು ಇನ್ನೂ ಹಾಜರುಪಡಿಸಿಲ್ಲ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 

ಇತ್ತೀಚೆಗಷ್ಟೇ ಗುಜರಾತ್‌ ಹತ್ಯಾಕಾಂಡದ ಕುರಿತು ಆಧಾರವಿಲ್ಲದ ಮಾಹಿತಿಗಳನ್ನು ನೀಡಿದ್ದಾರೆ ಎಂದು ಕೇಂದ್ರ ಸಚಿವ ಅಮಿತ್‌ ಶಾ ತೀಸ್ತಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)