ಕೇವಲ ದಾಖಲೆ ಪರಿಶೀಲನೆಗಾಗಿ ಟ್ರಾಫಿಕ್ ಪೊಲೀಸರು ವಾಹನಗಳನ್ನು ನಿಲ್ಲಿಸಬಾರದು: ಡಿಜಿಪಿ ಪ್ರವೀಣ್ ಸೂದ್ ಸೂಚನೆ
ಫೈಲ್ ಚಿತ್ರ
ಬೆಂಗಳೂರು: ಕೇವಲ ದಾಖಲೆ ಪರಿಶೀಲನೆಗೆ ಟ್ರಾಫಿಕ್ ಪೊಲೀಸರು ವಾಹನಗಳನ್ನು ನಿಲ್ಲಿಸಬಾರದು. ಕೇವಲ ಟ್ರಾಫಿಕ್ ರೂಲ್ಸ್ನ್ನು ಉಲ್ಲಂಘಿಸಿದವರ ವಾಹನಗಳನ್ನು ಮಾತ್ರ ನಿಲ್ಲಿಸುವಂತೆ ಟ್ರಾಫಿಕ್ ಪೊಲೀಸರಿಗೆ ಡಿಜಿ & ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರವೀಣ್ ಸೂದ್, ಕಣ್ಣಿಗೆ ಕಾಣುವಂತೆ ರೂಲ್ಸ್ ಬ್ರೇಕ್ ಮಾಡುವಂತಹ ವಾಹನಗಳನ್ನು ತಡೆದು ಪರಶೀಲಿಸಿ ಎಂದು ನಗರದ ಪೊಲೀಸ್ ಕಮೀಷನರ್ ಹಾಗೂ ಟ್ರಾಫಿಕ್ ಜಂಟಿ ಆಯುಕ್ತರನ್ನು ಟ್ಯಾಗ್ ಮಾಡಿ ಡಿಜಿಪಿ ಟ್ವೀಟ್ ಮಾಡಿದ್ದಾರೆ.
ವಾಹನಗಳ ತಡೆದು ಪರಿಶೀಲನೆ ನಡೆಸುವ ಬಗ್ಗೆ ಕೆಲವರು ಟ್ವಿಟರ್ ನಲ್ಲಿ ದೂರಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯುಕ್ತರು ಟ್ವಿಟರ್ ನಲ್ಲೇ ಪ್ರತಿಕ್ರಿಯಿಸಿರುವ ಪ್ರವೀಣ್ ಸೂದ್, ರಸ್ತೆಯಲ್ಲಿ ಬರುವ ವಾಹನಗಳನ್ನು ಸುಖಾಸುಮ್ಮನೆ ತಡೆದು ಪರಿಶೀಲನೆ ನಡೆಸುವಂತಿಲ್ಲ. ಕಣ್ಣಿಗೆ ಕಾಣುವಂತೆ ರೂಲ್ಸ್ ಬ್ರೇಕ್ ಮಾಡುವ, ಕುಡಿದು ವಾಹನ ಚಲಾಯಿಸುವ (ಡ್ರಿಂಕ್ & ಡ್ರೈವ್) ವಾಹನಗಳನ್ನು ಮಾತ್ರ ತಪಾಸಣೆ ನಡೆಸಿ ಎಂದು ಹೇಳಿದ್ದಾರೆ.
Yes I stand by it & reiterate again… no vehicle SHALL BE STOPPED only for checking documents unless it has committed a traffic violation visible to the naked eye. Only exception is drunken driving. Have instructed @CPBlr & @jointcptraffic for its implementation immediately. https://t.co/Ecg8y4FlGP
— Praveen Sood (@Copsview) June 27, 2022