varthabharthi


ಬೆಂಗಳೂರು

ಬೆಂಗಳೂರು | ನಾಡಪ್ರಭು ಕೆಂಪೇಗೌಡ ಜಯಂತೋತ್ಸವ: ಕೆಂಪೇಗೌಡ ಪ್ರಶಸ್ತಿ ಪ್ರದಾನ

ವಾರ್ತಾ ಭಾರತಿ : 27 Jun, 2022

ಬೆಂಗಳೂರು, ಜೂ.27: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಅವರ 512ನೇ ಜಯಂತಿ ಉತ್ಸವವನ್ನು ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಇನ್ಫೋಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಹಾಗೂ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ ಪ್ರಕಾಶ ಪಡುಕೋಣೆಯವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನಾರಾಯಣಮೂರ್ತಿ ಪರವಾಗಿ ಸುಧಾ ನಾರಾಯಣಮೂರ್ತಿ, ಪಡುಕೋಣೆ ಪರವಾಗಿ ವಿಪುಲ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು.

ಸಮಾರಂಭದಲ್ಲಿ ಡಾ.ನಿರ್ಮಲಾನಂದ ಮಹಾಸ್ವಾಮಿ, ನಂಜಾವಧೂತ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ, ಸಚಿವರಾದ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಆರ್.ಅಶೋಕ, ಕೆ.ಗೋಪಾಲಯ್ಯ, ಸುನೀಲ್ ಕುಮಾರ್, ಸಂಸದ ತೇಜಸ್ವಿ ಸೂರ್ಯ, ಮುನಿರತ್ನ ಮತ್ತು ಇತರರು ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)