ಕರ್ನಾಟಕ
ಗೋವುಗಳ ಅಕ್ರಮ ಸಾಗಣೆ: ಸ್ಥಿತಿಗತಿ ವರದಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ
ವಾರ್ತಾ ಭಾರತಿ : 30 Jun, 2022

ಬೆಂಗಳೂರು, ಜೂ.29: ರಾಜ್ಯದಲ್ಲಿ ಗೋವುಗಳ ಅಕ್ರಮ ಸಾಗಣೆಗೆ ಸಂಬಂಧಿಸಿದಂತೆ ಸ್ಥಿತಿಗತಿ ವರದಿ ಸಲ್ಲಿಸಲು ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.
ಹೊಸದಿಲ್ಲಿ ಮೂಲದ ಗೋಗ್ಯಾನ್ ಫೌಂಡೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ರಾಜ್ಯ ಸರಕಾರಕ್ಕೆ ಈ ನಿರ್ದೇಶನ ನೀಡಿದೆ.
ಅರ್ಜಿದಾರರ ಪರ ವಾದಿಸಿದ ವಕೀಲರು, ಬೆಂಗಳೂರುನಗರ ಜಿಲ್ಲೆ ಸೇರಿ ಹಲವು ಜಿಲ್ಲೆಗಳಲ್ಲಿ ಗೋವುಗಳ ಅಕ್ರಮ ಸಾಗಣೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಪೀಠಕ್ಕೆ ತಿಳಿಸಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠವು ಗೋವುಗಳ ಅಕ್ರಮ ಸಾಗಣೆ ಬಗ್ಗೆ ಸ್ಥಿತಿಗತಿ ವರದಿ ಸಲ್ಲಿಸಲು ನಿರ್ದೇಶನ ನೀಡಿದೆ. ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿಕೆ ಮಾಡಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)