ಭಾರೀ ಮಳೆ | ಉಡುಪಿ ಜಿಲ್ಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತ, ಹಲವೆಡೆ ಕೃತಕ ನೆರೆ
ಉಡುಪಿ, ಜೂ.30: ಕಳೆದೊಂದು ದಿನದಿಂದ ನಿರಂತರವಾಗಿ ಸುರಿಯುತ್ತಿರುವ ಜಡಿಮಳೆಯಿಂದ ಜಿಲ್ಲೆಯಲ್ಲಿ ಈ ಸಲ ಮೊದಲ ಬಾರಿ ನೆರೆಯ ಭೀತಿ ತಲೆದೋರಿದೆ.
ಕಳೆದ ಸುಮಾರು 18 ಗಂಟೆಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಜಿಲ್ಲೆಯ ತಗ್ಗು ಪ್ರದೇಶಗಳೆಲ್ಲವೂ ನೀರಿನಿಂದ ಆವೃತ್ತವಾಗಿವೆ. ನಗರ ಪ್ರದೇಶಗಳಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿ ಮತ್ತೆ ಸರ್ವಿಸ್ ರಸ್ತೆಗಳ ಮೇಲೆ ನೀರು ಹರಿಯುತ್ತಿದ್ದು, ಕೃತಕ ನೆರೆ ಕಾಣಿಸಿಕೊಂಡಿದೆ. ಇದರಿಂದಾಗಿ ಹೆಚ್ಚಿನ ಕಡೆ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಪಕ್ಕದ ದಕ್ಷಿಣ ಕನ್ನಡದಲ್ಲಿ ಕಾಲೇಜುಗಳಿಗೆ ರಜೆ ನೀಡಿದ್ದರೂ ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿಲ್ಲ.
ಸತತ ಮಳೆಯಿಂದ ಜಿಲ್ಲೆಯ ನದಿಗಳಲ್ಲಿ ನೀರಿನ ಮಟ್ಟ ನಿಧಾನವಾಗಿ ಏರುತ್ತಿದೆ. ಮಳೆಯೊಂದಿಗೆ ಗಾಳಿ ಇಲ್ಲದ ಕಾರಣ ಸದ್ಯಕ್ಕೆ ಜಿಲ್ಲೆಯಲ್ಲಿ ನೆರೆ ಭೀತಿ ಎದುರಾಗಿಲ್ಲ. ಉಡುಪಿ ಸೇರಿದಂತೆ ಹಲವೆಡೆ ಕೃತಕ ನೆರೆಯಷ್ಟೇ ಕಾಣಿಸಿಕೊಂಡಿದೆ.
Next Story