ಡಿಇಎಲ್ಇಡಿ, ಡಿಪಿಎಸ್ಇ ಪರೀಕ್ಷೆಗೆ ನಿಷೇಧಾಜ್ಷೆ ಜಾರಿ
ಉಡುಪಿ, ಜು.೨: ಜಿಲ್ಲೆಯಲ್ಲಿ ಜು.೪ರಿಂದ ೧೪ರವರೆಗೆ ಪ್ರಥಮ ಮತ್ತು ದ್ವಿತೀಯ ಡಿ.ಇಎಲ್.ಇ.ಡಿ ಹಾಗೂ ಡಿ.ಪಿ.ಎಸ್.ಇ ಪರೀಕ್ಷೆಗಳು ಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಇಲ್ಲಿ ನಡೆಯಲಿದ್ದು, ಪರೀಕ್ಷೆಗಳು ಮುಕ್ತಾಯವಾಗುವವರೆಗೂ ಸಂಬಂಧಿಸಿದ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಯಲು ನಿಗದಿಪಡಿಸಿದ ಪರೀಕ್ಷಾ ಕೇಂದ್ರದ ೨೦೦ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ,೧೪೪(೧)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.
Next Story