ಜು.5ರಂದು ಹೆಬ್ರಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ
ಉಡುಪಿ: ಕಳೆದೆರಡು ದಿನಗಳಿಂದ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಎರಡು ದಿನಗಳ ಕಾಲವೂ ಹೆಚ್ಚಿನ ಮಳೆಯಾಗುವ ಸಂಭವವಿರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿ ಯಿಂದ ಜು.5ರ ಮಂಗಳವಾರದಂದು ಹೆಬ್ರಿ ತಾಲೂಕು ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್.ಆದೇಶ ಹೊರಡಿಸಿದ್ದಾರೆ.
Next Story