ಜು.23: ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿಯಿಂದ ಮಸ್ಜಿದ್ ಡೈರಿ ಬಿಡುಗಡೆ

ಬಂಟ್ವಾಳ, ಜು.20: ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿಯ ವತಿಯಿಂದ ತಾಲೂಕು ಮಸ್ಜಿದ್ ಡೈರಿ ಬಿಡುಗಡೆ, ಕುರ್ ಆನ್ - ಕಿರಾಅತ್ ಸ್ಪರ್ಧೆ, ಮದ್ರಸ - ಶಾಲೆ - ಕಾಲೇಜುಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮವು ಜು.23ರಂದು ಪಾಣೆಮಂಗಳೂರಿನ ಸಾಗರ್ ಆಡಿಟೋರಿಯಂನಲ್ಲಿ ನಡೆಯಲಿದೆ.
ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ದುಆ ನೆರವೇರಿಸಲಿದ್ದು, ಉಡುಪಿ - ಚಿಕ್ಕಮಗಳೂರು ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉದ್ಘಾಟಿಸುವರು.
ಯು.ಎ.ಇ. ಅಜ್ಮಾನ್ ಗಲ್ಫ್ ಮೆಡಿಕಲ್ ಯುನಿವರ್ಸಿಟಿ ಅಧ್ಯಕ್ಷ ಡಾ.ತುಂಬೆ ಮೊಹಿದಿನ್ ಮಸ್ಜಿದ್ ಡೈರಿಯನ್ನು ಬಿಡುಗಡೆ ಗೊಳಿಸಲಿದ್ದು, ಸಂಯುಕ್ತ ಜಮಾಅತ್ ಅಧ್ಯಕ್ಷ ಮುಹಮ್ಮದ್ ಹನೀಫ್ ಗೋಳ್ತಮಜಲು ಅಧ್ಯಕ್ಷತೆ ವಹಿಸುವರು.
ಯೆನೆಪೊಯ ಡೀಮ್ಡ್ ವಿಶ್ವವಿದ್ಯಾನಿಲಯದ ಕುಲಪತಿ ಡಾ.ವೈ.ಅಬ್ದುಲ್ಲಾ ಕುಂಞಿ, ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಎನ್.ಕೆ.ಎಂ. ಶಾಫಿ ಸಅದಿ, ಉದ್ಯಮಿಗಳಾದ ಅಬ್ದುಲ್ ರವೂಫ್ ಸುಲ್ತಾನ್ ಗೋಲ್ಡ್, ಎಸ್.ಮುಹಮ್ಮದ್ ಸಾಗರ್, ನೆಹರು ನಗರ ಖತೀಬ್ ಅಬ್ದುಸ್ಸಲಾಂ ಫೈಝಿ ಇರ್ಫಾನಿ, ಆಲಡ್ಕ ಮುದರ್ರಿಸ್ ಅಶ್ರಫ್ ಸಖಾಫಿ ಮೊದಲಾದವರು ಭಾಗವಹಿಸಲಿದ್ದಾರೆ ಸಂಯುಕ್ತ ಜಮಾಅತ್ ಕಮಿಟಿಯ ಕಾರ್ಯದರ್ಶಿ ನೋಟರಿ ಅಬೂಬಕರ್ ವಿಟ್ಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ.