ವ್ಯಕ್ತಿ ನಾಪತ್ತೆ
ಉಡುಪಿ : ಹಿರಿಯಡ್ಕ ಗ್ರಾಮದ ಪಂಚನಬೆಟ್ಟು ನಿವಾಸಿ ದಿನೇಶ್ ನಾಯಕ್ (55) ಎಂಬವರು ಜುಲೈ 25ರಂದು ಬೆಳಗ್ಗೆ 7.30ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5ಅಡಿ 7ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story