varthabharthi


ಕರ್ನಾಟಕ

''ಸಿದ್ದರಾಮಯ್ಯರ ಬಗ್ಗೆ ಅಪಾರ ಗೌರವವಿದೆ...''

ಶೀಘ್ರದಲ್ಲೇ ದಾವಣಗೆರೆಯಲ್ಲಿ ಬಿಜೆಪಿಯಿಂದ ಬೃಹತ್ ಸಮಾವೇಶ: ಶಾಸಕ ಎಂ.ಪಿ.ರೇಣುಕಾಚಾರ್ಯ

ವಾರ್ತಾ ಭಾರತಿ : 5 Aug, 2022

ಬೆಂಗಳೂರು, ಆ. 5: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಹಲವು ಜನಪರ ಕಾರ್ಯಕ್ರಮಗಳನ್ನು ತಂದಿದೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಡೆಸಿದ ಸಿದ್ದರಾಮಯ್ಯ ಅಮೃತ ಮಹೋತ್ಸವದಿಂದ ನಮಗೇನು ಭಯವಿಲ್ಲ ಎಂದ ಅವರು, ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಪಕ್ಷದಿಂದ ಶೀಘ್ರದಲ್ಲೇ ದಾವಣಗೆರೆಯಲ್ಲಿ ಬೃಹತ್ ಕಾರ್ಯಕ್ರಮವನ್ನು ಏರ್ಪಡಿಸಲಿದ್ದೇವೆ' ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು,  ‘ವಿಪಕ್ಷ ನಾಯಕ ಸಿದ್ದರಾಮಯ್ಯನವರ ಬಗ್ಗೆ ನನಗೆ ವೈಯಕ್ತಿಕವಾಗಿ ಅಪಾರ ಗೌರವವಿದೆ. ಅವರ ಮೇಲಿನ ಅಭಿಮಾನದಿಂದಲೇ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು. ಆದರೆ, ಅವು ಕಾಂಗ್ರೆಸ್ ಪಕ್ಷಕ್ಕೆ ಮತಗಳಾಗುವುದಿಲ್ಲ' ಎಂದು 

 ‘ಸಿದ್ದರಾಮಯ್ಯ ಹಾಗೂ ಡಿಕೆಶಿ, ರಾಹುಲ್ ಗಾಂಧಿ ಬಲವಂತಕ್ಕೆ ಪರಸ್ಪರ ಅಪ್ಪಿಕೊಂಡಿದ್ದು ಇವರ ಒಗ್ಗಟ್ಟನ್ನು ನೋಡಿದರೆ ನಗು ಬರುತ್ತದೆ. ರಾಜ್ಯದಲ್ಲಿ ಮುಂದಿನ ಚುನಾವಣೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಇದ್ದಾರೆ' ಎಂದು ಲೇವಡಿ ಮಾಡಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)