varthabharthi


ದಕ್ಷಿಣ ಕನ್ನಡ

ಪುತ್ತೂರು: ವಸತಿ ಸಮುಚ್ಚಯದ ಮಹಡಿಯಿಂದ ಬಿದ್ದು ವಿದ್ಯಾರ್ಥಿಗೆ ಗಂಭೀರ ಗಾಯ

ವಾರ್ತಾ ಭಾರತಿ : 5 Aug, 2022

ಸಾಂದರ್ಭಿಕ ಚಿತ್ರ

ಪುತ್ತೂರು: ಬೊಳುವಾರಿನಲ್ಲಿರುವ ವಸತಿ ಸಮುಚ್ಚಯದ ಮಹಡಿ ಮೇಲಿಂದ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿಯೋರ್ವ ಗಂಭೀರ ಗಾಯಗೊಂಡಿರುವ ಘಟನೆ ಆ.5ರಂದು ಸಂಜೆ ನಡೆದಿದೆ.

ಸುದಾನ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಶಾನ್ ರೈ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದು ಆತನನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಬೊಳುವಾರು ಮಲರಾಯ ದೈವಸ್ಥಾನದ ಬಳಿಯ ಮನೋಹರ್ ರೈ ಎಂಬವರ ಪುತ್ರ ಸುಶಾನ್ ರೈ ವಸತಿ ಸಮುಚ್ಚಯದಲ್ಲಿರುವ ಸ್ನೇಹಿತನ ಮನೆಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭಿಸಬೇಕಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)