ಹೈಕೋರ್ಟ್ ನ್ಯಾಯಮೂರ್ತಿ ಹೆಸರಿನಲ್ಲಿ ವಂಚನೆ: ಆರೋಪ
ಬೆಂಗಳೂರು, ಆ.11: ಹೈಕೋರ್ಟಿನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಹೆಸರಿನಲ್ಲಿ ಹೈಕೋರ್ಟ್ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಸಿಜೆ ಹೆಸರಲ್ಲಿ ಅಧಿಕಾರಿಯ ವಾಟ್ಸಾಪ್ಗೆ 10 ಸಾವಿರ ಮೌಲ್ಯದ ಒಟ್ಟು 9 ಅಮೆಜಾನ್ ಉಡುಗೊರೆ ಕಳಿಸಿ ವಂಚನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಆ.6ರ ಬೆಳಗ್ಗೆ ಅಧಿಕಾರಿಯ ವಾಟ್ಸಾಪ್ಗೆ ಸಂದೇಶ ರವಾನೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರಿನ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದು, ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story