varthabharthi


ಉಡುಪಿ

ಮಲ್ಪೆ: ಆ.18ರಂದು ಕಡಲತೀರದ ಸ್ವಚ್ಛತೆ, ಸಮುದ್ರ ಮಾಲಿನ್ಯ ಕುರಿತು ಅರಿವು ಕಾರ್ಯಕ್ರಮ

ವಾರ್ತಾ ಭಾರತಿ : 17 Aug, 2022

ಉಡುಪಿ, ಆ.17: ಕೇಂದ್ರ ಸರಕಾರದ ಭೂವಿಜ್ಞಾನ ಸಚಿವಾಲಯ, ಸಮುದ್ರ ಜೀವ ಸಂಪನ್ಮೂಲ ಮತ್ತು ಪರಿಸರ ವಿಜ್ಞಾನಕೇಂದ್ರ ಹಾಗೂ ಎ.ಟಿ.ಎ.ಎಲ್ ಭವನ್ ಕೊಚ್ಚಿ ಇವರ ಸಹಯೋಗದಲ್ಲಿ ‘ಸ್ವಚ್ಛ್ ಸಾಗರ್ ಸುರಕ್ಷಿತ್ ಸಾಗರ್’ ಕಾರ್ಯಕ್ರಮದಡಿ ಸಮುದ್ರ ಮಾಲಿನ್ಯ ಮತ್ತು ಕಡಲ ತೀರದ ಸ್ವಚ್ಛತೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವೊಂದು ಆ.18ರ ಬೆಳಗ್ಗೆ 9 ಗಂಟೆಗೆ ಮಲ್ಪೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಉದ್ಘಾಟಿಸಲಿದ್ದು, ನಗರಸಭೆಯ ಪೌರಾಯುಕ್ತ ಡಾ.ಉದಯ್‌ಕುಮಾರ್ ಶೆಟ್ಟಿ, ಉಡುಪಿ ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀ ನಾರಾಯಣ ಕಾರಂತ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)