varthabharthi


ಉಡುಪಿ

ಉಡುಪಿ; ಸೆ.3ಕ್ಕೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ವಾರ್ತಾ ಭಾರತಿ : 17 Aug, 2022

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆ.3 ರಂದು ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ, ಕುಂದಾಪುರ ಹಾಗೂ ಕಾರ್ಕಳದ ತಾಲೂಕು ಕ್ರೀಡಾಂಗಣಗಳಲ್ಲಿ ನಡೆಯಲಿದೆ.

ಸ್ಪರ್ಧೆಗಳ ವಿವರ: ಪುರುಷರಿಗೆ: 100ಮೀ, 200ಮೀ, 400ಮೀ, 800ಮೀ, 1500ಮೀ, 5000ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್‌ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್‌ಥ್ರೋ, 110ಮೀ. ಹರ್ಡಲ್ಸ್, 100ಮೀ ರಿಲೇ, 400ಮೀ. ರಿಲೇ ಹಾಗೂ ಗುಂಪು ಕ್ರೀಡೆಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್‌ಬಾಲ್.

ಮಹಿಳೆಯರಿಗೆ: ೧೦೦ಮೀ, ೨೦೦ಮೀ, ೪೦೦ಮೀ, ೮೦೦ಮೀ, ೧೫೦೦ಮೀ, ೩೦೦೦ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್‌ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್‌ಥ್ರೋ, ೧೦೦ಮೀ. ಹರ್ಡಲ್ಸ್, ೧೦೦ಮೀ. ರಿಲೇ, ೪೦೦ಮೀ. ರಿಲೇ, ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಪಂದ್ಯಾಟ ನಡೆಯಲಿವೆ.

ಕ್ರೀಡಾಪಟುಗಳು ತಮಗೆ ಸಂಬಂಧ ಪಟ್ಟ ತಾಲೂಕುಗಳಲ್ಲಿ ನಡೆಯುವ ಕ್ರೀಡಾಕೂಟಗಳಲ್ಲಿ  ಭಾಗವಹಿಸಬಹುದಾಗಿದೆ. ಆಧಾರ್ ಕಾರ್ಡ್ ಪ್ರತಿಯನ್ನು ತಪ್ಪದೇ ಹಾಜರುಪಡಿತಕ್ಕದ್ದು.  ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡವು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿವೆ.  

ಕ್ರೀಡಾಪಟುಗಳು ಹೆಸರು ಹಾಗೂ ತಂಡಗಳನ್ನು ನೊಂದಾಯಿಸಲು ಆಗಸ್ಟ್ ೩೦ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: ೦೮೨೦- ೨೫೨೧೩೨೪, ಮೊ.ನಂ.೯೪೮೦೮-೮೬೪೬೭ ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)