varthabharthi


ರಾಷ್ಟ್ರೀಯ

ಜಮ್ಮು: ಒಂದೇ ಕುಟುಂಬದ 6 ಮಂದಿ ಅನುಮಾನಾಸ್ಪದ ಸಾವು

ವಾರ್ತಾ ಭಾರತಿ : 17 Aug, 2022

ಲಹಾರ್(ಮಧ್ಯಪ್ರದೇಶ), ಆ. 16: ಜಮ್ಮುವಿನಲ್ಲಿ ಒಂದೇ ಕುಟುಂಬದ 6 ಮಂದಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟವರನ್ನು ಸಕೀನಾ ಬೇಗಂ, ಅವರ ಇಬ್ಬರು ಪುತ್ರಿಯರಾದ ನಸೀಮಾ ಅಖ್ತರ್ ಹಾಗೂ ರುಬಿನಾ ಬಾನು, ಪುತ್ರ ಝಾಫರ್ ಸಲೀಂ, ಇಬ್ಬರು ಸಂಬಂಧಿಕರಾದ ನೂರ್ ಉಲ್ ಹಬೀಬ್ ಹಾಗೂ ಸಾಜದ್ ಅಹ್ಮದ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮುವಿನ ಸಿಧ್ರಾ ಪ್ರದೇಶದಲ್ಲಿರುವ ಮನೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ಮೃತರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ರೂಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಕೊಹ್ಲಿ ತಿಳಿಸಿದ್ದಾರೆ.

ಮೃತದೇಹಗಳನ್ನು ನಗರದಲ್ಲಿರುವ ಸರಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನದ ತಜ್ಞರು ಭೇಟಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)