ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಆಹ್ವಾನ
ಉಡುಪಿ : ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್, ತರಬೇತಿ ಸಂಸ್ಥೆಯ ವತಿಯಿಂದ ಸಿ.ಎನ್.ಸಿ ಪ್ರೋಗ್ರಾಮರ್ ಮತ್ತು ಆಪರೇಟರ್, ಮೆಷಿನಿಷ್ಟ್ ಹಾಗೂ ಎಲೆಕ್ಟ್ರಿಷಿಯನ್ ಮತ್ತು ವೆಲ್ಡರ್ಟ್ರೇಡ್ಗಳಲ್ಲಿ ಅಪ್ರೆಂಟಿಶಿಪ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
15 ರಿಂದ 18 ವರ್ಷದೊಳಗಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.60ರಷ್ಟು ಅಂಕ ಪಡೆದ ಸಾಮಾನ್ಯ ಅಭ್ಯರ್ಥಿಗಳು ಮತ್ತು ಶೇ.50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾದ ಎಸ್ಸಿ, ಎಸ್ಟಿ ಹಾಗೂ ಪಿಡಬ್ಯೂಡಿ ಅಭ್ಯರ್ಥಿಗಳು ಸೆ.8 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಉಡುಪಿ ಮೊ.ನಂ. 9945856670, 8197440155, ದೂ.ಸಂಖ್ಯೆ: 080-22322516, 22323358, 22323250 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story