ಶುಶ್ರೂಷಕರ ಹುದ್ದೆಗೆ ನೇರ ಸಂದರ್ಶನ
ಉಡುಪಿ: ಕುಂದಾಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕರು-3 ಹುದ್ದೆಯನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡುವ ಸಲುವಾಗಿ ಆಗಸ್ಟ್ 24ರಂದು ಬೆಳಗ್ಗೆ 10:30ರಿಂದ ಅಪರಾಹ್ನ 1:00 ಗಂಟೆಯವರೆಗೆ ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.
ಶುಶ್ರೂಷಾ ತರಬೇತಿ ಹೊಂದಿದ, ಕರ್ನಾಟಕ ನರ್ಸಿಂಗ್ ಕೌನ್ಸಿಲ್ನಲ್ಲಿ ನೊಂದಾಯಿತ ಅಭ್ಯರ್ಥಿಗಳು ಮೂಲ ದಾಖಲಾತಿ ಹಾಗೂ ದೃಢೀಕೃತ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story