ಕನ್ನಡ ಚೆಕ್ ಅಮಾನ್ಯ: ಎಸ್ಬಿಐಗೆ 85 ಸಾವಿರ ರೂ. ದಂಡ ವಿಧಿಸಿದ ಕೋರ್ಟ್
ಸಾಂದರ್ಭಿಕ ಚಿತ್ರ
ಬೆಂಗಳೂರು, ಸೆ.8: ಕನ್ನಡ ಭಾಷೆಯಲ್ಲಿ ಬರೆದ ಚೆಕ್ನ್ನು ಅಮಾನ್ಯ ಮಾಡಿದ್ದ ಭಾರತೀಯ ಸ್ಟೇಟ್ ಬ್ಯಾಂಕ್ಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 85,177 ದಂಡ ಪರಿಹಾರ ಪಾವತಿಸುವಂತೆ ಆದೇಶಿಸಿದೆ.
ಧಾರವಾಡದ ಇಂಗ್ಲಿಷ್ ಪ್ರಾಧ್ಯಾಪಕ ವಾದಿರಾಜಾಚಾರ್ಯ ಇನಾಮದಾರ ಎಂಬುವರು ತಮ್ಮ ಉಳಿತಾಯ ಖಾತೆಯಲ್ಲಿದ್ದ ಹಣ ಹಿಂಪಡೆಯಲು ಕನ್ನಡದಲ್ಲಿ ಬರೆದು ಸಲ್ಲಿಸಿದ್ದ ಚೆಕ್ನ್ನು ರಾಷ್ಟ್ರೀಕೃತ ಬ್ಯಾಂಕ್ವೊಂದರ(ಎಸ್ಬಿಐ) ಹಳಿಯಾಳದ ಶಾಖೆ ತಿರಸ್ಕರಿಸಿತ್ತು.
ಕೇಸ್ನ್ನು ವಿಚಾರಣೆಗೆ ಕೈಗೆತ್ತಿಕೊಂಡ ಆಯೋಗವು ಕನ್ನಡ ಭಾಷೆಯಲ್ಲಿ ಬರೆದಿರುವುದಕ್ಕೆ ಅಮಾನ್ಯ ಮಾಡಿರುವುದನ್ನು ಸೇವಾ ನ್ಯೂನತೆ ಎಂದು ಪರಿಗಣಿಸಿದೆ.
Next Story