ಬೆಂಗಳೂರು: ದಾಖಲೆ ಇಲ್ಲದ ನಗದು ಜಪ್ತಿ
ಸಾಂದರ್ಭಿಕ ಚಿತ್ರ
ಬೆಂಗಳೂರು, ಸೆ.18: ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾಖಲೆ ಇಲ್ಲದೆ ಅಕ್ರಮವಾಗಿ ವಿದೇಶಕ್ಕೆ ಸಾಗಿಸುತ್ತಿದ್ದ 35 ಲಕ್ಷ ರೂ. ಜಪ್ತಿ ಮಾಡಲಾಗಿದೆ.
ಆದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ವಿದೇಶಿ ನಗದು ಇದಾಗಿದ್ದು, ಆತನಿಂದ ಭಾರತೀಯ ರೂಪಾಯಿ ಮೌಲ್ಯದ 35 ಲಕ್ಷ ರೂಗಳನ್ನು ಜಪ್ತಿ ಮಾಡಲಾಗಿದೆ ಎಂದು ಸ್ಥಳೀಯ ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಬುದಾಬಿಗೆ ಹೋಗುತ್ತಿದ್ದ ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಆತನ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 45 ಸಾವಿರ ಡಾಲರ್ ಮತ್ತು 185 ಧಿರಮ್ ವಿದೇಶಿ ಕರೆನ್ಸಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
Next Story