ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ ಬಿಜೆಪಿ ಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ: ಸಿದ್ದರಾಮಯ್ಯ ಕಿಡಿ
ಬೆಂಗಳೂರು: 'ರಾಜ್ಯ ಸರ್ಕಾರವು ಸರ್ಕಾರಿ ನೇಮಕಾತಿಗಳಲ್ಲಿ ನಡೆಸುತ್ತಿರುವ ಅಕ್ರಮಗಳಿಂದಾಗಿ ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಿದ ಅಭ್ಯರ್ಥಿಗಳಿಗೆ ಉದ್ಯೋಗ ಸಿಗದೆ, ಬದುಕು ಅತಂತ್ರವಾಗಿದೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಲಕ್ಷಾಂತರ ನೊಂದ ಯುವ ಜನರ ಪರವಾಗಿ ಸದನದ ಒಳಗೆ ಮತ್ತು ಹೊರಗೆ ನನ್ನ ಹೋರಾಟ ಮುಂದುವರಿಸುತ್ತೇನೆ. ಪಾರದರ್ಶಕ ನೇಮಕಾತಿ ನಡೆಯಲಿ, ಅರ್ಹರು ಆಯ್ಕೆಯಾಗಲಿ' ಎಂದು ಆಗ್ರಹಿಸಿದ್ದಾರೆ.
'ಸರ್ಕಾರಿ ಉದ್ಯೋಗಗಳಿಗೆ ಲಂಚ ಕೊಡುವ ಶಕ್ತಿಯಿಲ್ಲದ ಬಡ ಉದ್ಯೋಗಕಾಂಕ್ಷಿಗಳು ತಮ್ಮ ಪೋಷಕರು ಬೆಳೆದ ಅಕ್ಕಿ, ರಾಗಿ, ಜೋಳ ಮುಂತಾದ ಬೆಳೆಗಳ ಗಂಟನ್ನು ನನ್ನ ಕೈಗಿತ್ತು ಸರ್ಕಾರಕ್ಕೆ ತಲುಪಿಸಿ, ಉದ್ಯೋಗ ಕೊಡಿಸಿ ಎಂದು ಕೋರಿದ್ದಾರೆ. ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ ಬಿಜೆಪಿ ಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ' ಎಂದು ಕಿಡಿಕಾರಿದ್ದಾರೆ.
ಸರ್ಕಾರಿ ಉದ್ಯೋಗಗಳಿಗೆ ಲಂಚ ಕೊಡುವ ಶಕ್ತಿಯಿಲ್ಲದ ಬಡ ಉದ್ಯೋಗಕಾಂಕ್ಷಿಗಳು ತಮ್ಮ ಪೋಷಕರು ಬೆಳೆದ ಅಕ್ಕಿ, ರಾಗಿ, ಜೋಳ ಮುಂತಾದ ಬೆಳೆಗಳ ಗಂಟನ್ನು ನನ್ನ ಕೈಗಿತ್ತು ಸರ್ಕಾರಕ್ಕೆ ತಲುಪಿಸಿ, ಉದ್ಯೋಗ ಕೊಡಿಸಿ ಎಂದು ಕೋರಿದ್ದಾರೆ.
— Siddaramaiah (@siddaramaiah) September 20, 2022
ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ @BJP4Karnataka ಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ. pic.twitter.com/MI1j6mqqmQ