ಪುತ್ತೂರು: ಅಬ್ದುಲ್ ಖಾದರ್ ಮನೆಗೆ ಎನ್ಐಎ ದಾಳಿ
ಪುತ್ತೂರು: ರಾಷ್ಟ್ರೀಯ ತನಿಖಾ ದಳ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಮತ್ತು ಸ್ಥಳೀಯ ಪೊಲೀಸರ ತಂಡ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಇಂದು ಮುಂಜಾನೆಯಿಂದಲೇ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದೆ.
ಪಿ ಎಫ್ ಐ ಮತ್ತು ಎಸ್.ಡಿ.ಪಿ.ಐ ಮುಖಂಡರ ಮನೆಗಳಿಗೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಿದ ಪೊಲೀಸ್ ತಂಡ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ. ಪುತ್ತೂರಿನ ಸಾಮೆತ್ತಡ್ಕದಲ್ಲಿರುವ ಪಿಎಫ್ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಮನೆಗೆ ಪೊಲೀಸರೊಂದಿಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅದರೆ ಯಾವ ಮಾಹಿತಿ ಮತ್ತು ದಾಖಲೆಗಳನ್ನು ಸಂಗ್ರಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ.
Next Story