varthabharthi


ದಕ್ಷಿಣ ಕನ್ನಡ

ಉಪ್ಪಿನಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಲಾರಿ ಮಗುಚಿ ಬಿದ್ದು ನಾಲ್ವರಿಗೆ ಗಾಯ

ವಾರ್ತಾ ಭಾರತಿ : 22 Sep, 2022

ಉಪ್ಪಿನಂಗಡಿ : ಇಲ್ಲಿನ ಕೂಟೇಲು ಸೇತುವೆಯ ಸಮೀಪ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲೇ ಮಗುಚಿ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಗುರುವಾರ ರಾತ್ರಿ  ಸಂಭವಿಸಿದೆ. 

ಹೆದ್ದಾರಿ ಅಗಲೀಕರಣದ ಕಾಮಗಾರಿಗೆ ನಿಯುಕ್ತಿಗೊಂಡ ಸಂಸ್ಥೆಗೆ ಸೇರಿದ ಲಾರಿ ಇದಾಗಿದ್ದು, ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಮಧ್ಯೆ ಮಗುಚಿ ಬಿತ್ತು. ಈ ಪರಿಣಾಮ ಲಾರಿ ಚಾಲಕ ಮಧ್ಯಪ್ರದೇಶದ ನಿವಾಸಿಗಳಾದ ನಾರಾಯಣ್, ಕ್ಲೀನರ್ ಪುಷ್ಪೇಂದ್ರ  ಮತ್ತಿಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)