varthabharthi


ಉಡುಪಿ

ವೃದ್ಧ ನಾಪತ್ತೆ

ವಾರ್ತಾ ಭಾರತಿ : 23 Sep, 2022

ಉಡುಪಿ, ಸೆ.23: ಕಾಪು ತಾಲೂಕು ಕುತ್ಯಾರು ಗ್ರಾಮದ ನಿವಾಸಿ ಮಥಾಯಿ (64) ಎಂಬವರು ಕಳೆದ ಫೆ.10ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 

5 ಅಡಿ 5 ಇಂಚು ಎತ್ತರ, ದುಂಡು ಮುಖ, ಸಪೂರ ಶರೀರ ಹೊಂದಿದ್ದು, ಮಲಯಾಳಂ  ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಿರ್ವ ಪೊಲೀಸ್‌ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)