varthabharthi


ದಕ್ಷಿಣ ಕನ್ನಡ

ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

ವಾರ್ತಾ ಭಾರತಿ : 23 Sep, 2022

ಮಂಗಳೂರು : ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆಯು ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್ ಜಿಲ್ಲೆಯ 33 ಗ್ರಾಮಗಳಲ್ಲಿ ಯೂತ್ ಜೋಡೋ-ಬೂತ್ ಜೋಡೋ ಕಾರ್ಯಕ್ರಮದ ಮೂಲಕ ಯುವ ಕಾಂಗ್ರೆಸ್ ಗ್ರಾಮ ಸಮಿತಿಯನ್ನು ರಚಿಸಲಾಗಿದೆ. ಪ್ರತಿ ಗ್ರಾಮಗಳಲ್ಲಿ ಈ ಕಾರ್ಯಕ್ರಮಕ್ಕೆ ಅಭೂತಪೂರ್ವ ಯಶಸ್ಸು ದೊರಕುತ್ತಿದ್ದು, ಡಿಸೆಂಬರ್‌ನೊಳಗೆ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲೂ ಗ್ರಾಮ ಸಮಿತಿ ರಚನೆ ಮಾಡುವ ಮೂಲಕ ಪಕ್ಷ ಸಂಘಟನೆಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಕೆಪಿವೈಸಿ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ಎಸ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಗಿರೀಶ್ ಆಳ್ವ, ಕೆಪಿವೈಸಿ ಕಾರ್ಯದರ್ಶಿಗಳಾದ ದೀಪಕ್ ರಾಜಾಹುಲಿ, ಸರ್ಫರಾಝ್ ನವಾಝ್, ನಾಸೀರ್ ಸಾಮಣಿಗೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಮಾನಂದ ಪೂಜಾರಿ, ಪ್ರಸಾದ್ ಮಲ್ಲಿ, ವೈಭವ ಶೆಟ್ಟಿ, ನವೀದ್ ಅಖ್ತರ್, ಅಭಿನಂದನ್ ಹರೀಶ್, ಹಸನ್ ಫಳ್ನೀರ್, ಅಶ್ವಥ್‌ರಾಜ್, ದೀಕ್ಷಿತ್ ಅತ್ತಾವರ, ವಿಶಾಲ್ ಪೂಜಾರಿ, ಆಲ್ವಿನ್, ತುಫೇಲ್, ಅಭಿದೇವ್ ಅರಿಗ, ಸಂಜನ ಚಲವಾದಿ,  ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶಾಹುಲ್ ಹಮೀದ್, ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಕುಮಾರ್, ಬೆಳ್ತಂಗಡಿ ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ, ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ್, ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್, ಮಂಗಳೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷ ರಾಕೇಶ್ ದೇವಾಡಿಗ, ಮುಖಂಡರಾದ ನವೀನ್ ಗೌಡ, ಪ್ರಮೀತ್ ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)

ಟಾಪ್ ಸುದ್ದಿಗಳು