varthabharthi


ದಕ್ಷಿಣ ಕನ್ನಡ

ಸುರತ್ಕಲ್ ನಲ್ಲಿ ರಾ.ಹೆದ್ದಾರಿ ತಡೆದು ಪ್ರತಿಭಟನೆ‌‌: ಪಿಎಫ್ಐ, ಎಸ್ಡಿಪಿಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ವಾರ್ತಾ ಭಾರತಿ : 23 Sep, 2022

ಸುರತ್ಕಲ್, ಸೆ.23: ಸುರತ್ಕಲ್ ನಲ್ಲಿ ರಾ.ಹೆದ್ದಾರಿ ತಡೆದು ಪ್ರತಿಭಟನೆ‌‌ ಮಾಡಿದ್ದ ಪಿಎಫ್ಐ, ಎಸ್ಡಿಪಿಐ ಕಾರ್ಯಕರ್ತರ ವಿರುದ್ಧ ಸುರತ್ಕಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

ಎಸ್ ಡಿ ಪಿ ಐ , ಪಿಎಫ್ ಐ ನಾಯಕರ‌ ಮನೆ ಹಾಗೂ ಕಚೇರಿಗಳ ಮೇಲೆ ಎನ್ಐಎ ದಾಳಿ ಮಾಡಿ ಕೆಲವರನ್ನು ವಶಕ್ಕೆ ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪಿಎಫ್ಐ, ಎಸ್ಡಿಪಿಐ ಕಾರ್ಯಕರ್ತರು ಸುರತ್ಕಲ್‌ ಗೋವಿಂದದಾಸ‌ ಕಾಲೇಜು ಬಳಿ ರಾಷ್ಟ್ರಿಯ ಹೆದ್ದಾರಿ 66ರಲ್ಲಿ ವಾಹನಗಳನ್ನು ತಡೆದು ಹೆದ್ದಾರಿಯಲ್ಲಿ ಪ್ರತಿಭಟನೆ ಎನ್ಐಎ ವಿರುದ್ಧ ಘೋಷಣೆ ಕೂಗಿದ್ದರು.

ಮಧ್ಯಾಹ್ನ ಸುಮಾರು 12-30ರಿಂದ 12-40ರ ವರೆಗಿನ 10 ನಿಮಿಷಗಳ ಕಾಲ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ರೀತಿಯ ವಾಹನಗಳಿಗೆ, ಅಡ್ಡಿ ಅಡಚನೆಯನ್ನು ಉಂಟು ಮಾಡಿ ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡಿದ್ದಾರೆ ಎಂದು ಆರೋಪಿಸಿ ಸುರತ್ಕಲ್ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಸೊಮೊಟೊ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)