ಇಂಧನ ವಲಯದ ಹಿತಾಸಕ್ತಿಗಳನ್ನು ರಕ್ಷಿಸಲು ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ: ಕುಮಾರಸ್ವಾಮಿ
ವಿದ್ಯತ್ ದರ ಹೆಚ್ಚಳಕ್ಕೆ ಮಾಜಿ ಸಿಎಂ ಆಕ್ರೋಶ
ಬೆಂಗಳೂರು, ಸೆ.24: ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ. ಪ್ರತೀ ಯೂನಿಟ್ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ ಮತ್ತು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಅಕ್ಟೋಬರ್ 1ರಿಂದ ವಿದ್ಯತ್ ದರ ಹೆಚ್ಚಿಸಿರುವ ಸರಕಾರದ ಕ್ರಮವನ್ನು ಟೀಕಿಸಿ 'ನವರಾತ್ರಿಗೆಕರೆಂಟ್ ಶಾಕ್' ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರಕಾರ ವಿದ್ಯುತ್ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನ ಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್ ದರ ಏರಿಕೆ ಆಗಿದೆ! ಏನೀ ಹುನ್ನಾರ? ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ. ಪ್ರತೀ ಯೂನಿಟ್ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ ಮತ್ತು ಖಂಡನೀಯ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ ಎಂದು ಟೀಕಿಸಿದ್ದಾರೆ.
ರಾಜ್ಯ ಬಿಜೆಪಿ ಸರಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಚಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಕೇಂದ್ರ ಬಿಜೆಪಿ ಸರಕಾರದ ಹಾದಿಯಲ್ಲೇ ರಾಜ್ಯ ಬಿಜೆಪಿ ಸರಕಾರವೂ ಸಾಗಿದೆ. ವಿದ್ಯುತ್ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ.
ವಿದ್ಯುತ್ ಸೋರಿಕೆ, ಕಳವು ತಡೆಲಾಗದ, ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ ಬಿಜೆಪಿ ಸರಕಾರ ಅದಕ್ಷತೆಯ ಆಡಂಬೋಲ. ʼಬಡವರನ್ನು ಸುಲಿದು ಬಿಸ್ನೆಸ್ ಕ್ಲಾಸಿನ ಜನರ ಜೇಬು ತುಂಬುʼ ಎನ್ನುವುದು ಬಿಜೆಪಿ ತತ್ತ್ವ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್ ದರ ಏರಿಕೆ ಆಗಿದೆ! ಏನೀ ಹುನ್ನಾರ?ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ. ಪ್ರತಿ ಯೂನಿಟ್ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ & ಖಂಡನೀಯ. 2/4#ನವರಾತ್ರಿಗೆ_ಕರೆಂಟ್_ಶಾಕ್
— H D Kumaraswamy (@hd_kumaraswamy) September 24, 2022